ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗುವುದು ವಿಳಂಬವಾಗುವ ಸಾಧ್ಯತೆ ಇದೆ.
ಸಿಎಂ ಸಿದ್ಧರಾಮಯ್ಯ ಅವರು ಫೆ. 15ರವರೆಗೂ ಜಯಪ್ರಕಾಶ್ ಹೆಗಡೆ ಅವರ ಅವಧಿ ವಿಸ್ತರಿಸಿದ್ದು, ಇದರಿಂದಾಗಿ ಜಾತಿ ಗಣತಿ ವರದಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಕಳೆದ ನವಂಬರ್ ನಲ್ಲೇ ಜಯಪ್ರಕಾಶ್ ಹೆಗಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿತ್ತು. ಜನವರಿ 31ರವರೆಗೂ ಸರ್ಕಾರ ವಿಸ್ತರಿಸಿತ್ತು. ಈಗ ಆಯೋಗದಿಂದ ವರದಿ ಸ್ವೀಕರಿಸುವ ಹಿನ್ನೆಲೆಯಲ್ಲಿ ಫೆಬ್ರವರಿ 15ರವರೆಗೂ ವಿಸ್ತರಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ವರ್ಗದ ಜಾಗೃತಿ ಸಮಾವೇಶದಲ್ಲಿ ಕಾಂತರಾಜು ವರದಿ ಸ್ವೀಕರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು.