ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ.
ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. ಭಕ್ತವತ್ಸಲ ಸಮಿತಿ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನ್ಯಾ. ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಾದಿ ಸುಗಮವಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ನಡೆಸಲು ಎದುರಾಗಿದ್ದ ಅಡಚಣೆ ನಿವಾರಣೆಯದಂತಾಗಿದೆ.
ನ್ಯಾ. ಭಕ್ತವತ್ಸಲ ಸಮಿತಿ ಸುಪ್ರೀಂ ಕೋರ್ಟ್ ಗೆ ಮೀಸಲಾತಿ ಕುರಿತಾಗಿ ವರದಿ ಸಲ್ಲಿಸಿದ್ದು, ವರದಿಯ ಶಿಫಾರಸುಗಳಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಶೇಕಡ 50 ರಷ್ಟು ಮೀಸಲಾತಿ ಮೀರದಂತೆ ಇರುವ ಮೀಸಲಾತಿಯಲ್ಲಿ ಚುನಾವಣೆ ನಡೆಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಒಬಿಸಿ ವರ್ಗಗಳಿಗೆ ಮೀಸಲಾತಿ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.