alex Certify ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಕೆ ಕೊನೆ ಕ್ಷಣದಲ್ಲಿ ಅಭ್ಯರ್ಥಿಗೆ ಕೈಕೊಟ್ಟ ಜೆಡಿಎಸ್: ಮುನ್ನಾಭಾಯ್ ಬದಲು ಅನಿಲ್ ಲಾಡ್ ಗೆ ಬಿ ಫಾರಂ

ಬೆಂಗಳೂರು: ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನ್ನಾಭಾಯ್ ಅವರ ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ.

ಇಂದು ನಾಮಪತ್ರ ಸಲ್ಲಿಸಲು ಮುನ್ನಾಭಾಯ್ ಸಿದ್ಧತೆ ಮಾಡಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಜೆಡಿಎಸ್ ಮುನ್ನಾಭಾಯ್ ಗೆ ಕೈ ಕೊಟ್ಟಿದ್ದು ಅನಿಲ್ ಲಾಡ್ ಅವರಿಗೆ ಬಿ ಫಾರಂ ನೀಡಲಾಗಿದೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅನಿಲ್ ಲಾಡ್ ಟಿಕೆಟ್ ತಪ್ಪಿದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಬಿ ಫಾರಂ ಕೂಡ ಪಡೆದುಕೊಂಡಿದ್ದಾರೆ. ಚುನಾವಣೆ ತಯಾರಿ ಮಾಡಿಕೊಂಡಿದ್ದ ಮುನ್ನಾಭಾಯ್ ಗೆ ಭಾರಿ ನಿರಾಸೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...