ಮೈಸೂರು: ವಿಧಾನಪರಿಷತ್ ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ನಿರ್ಧಾರ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಮೈತ್ರಿಯ ಸಂಬಂಧ ಮಾತನಾಡಿದ ಅವರು, ಯಡಿಯೂರಪ್ಪ ನನಗೆ ಕರೆ ಮಾಡಿ ಬೆಂಬಲ ಕೋರಿದ್ದಾರೆ. ಇದು ನನ್ನ ಮತ್ತು ಯಡಿಯೂರಪ್ಪನವರ ವೈಯಕ್ತಿಕ ಮೈತ್ರಿ ಆಗಿದೆ ಎಂದು ಹೇಳಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ಬಿಜೆಪಿಗೆ ಬೆಂಬಲ ನೀಡುವ ಕುರಿತಂತೆ ಯಡಿಯೂರಪ್ಪ ಮನವಿ ಮಾಡಿದ್ದು, ಈ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.