ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು ಅಪ್ಲೋಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಕೋಲಾರ ತಾಲೂಕಿನ ಯಾನಾದಹಳ್ಳಿ ಗ್ರಾಮದ ರಾಜು ರಾಮಚರಣ್ ವಿರುದ್ಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಪ್ರಿಲ್ 1 ರಂದು ಜೆಡಿಎಸ್ ಪಕ್ಷದ ಚಿಹ್ನೆ ಇರುವ ಟೀ ಶರ್ಟ್ ಮತ್ತು ಹ್ಯಾಟ್ ಹಾಕಿಕೊಂಡು ಫೇಸ್ ಬುಕ್ ನಲ್ಲಿ ಹಾಕಿದ್ದ ಹಿನ್ನೆಲೆಯಲ್ಲಿ ಎಫ್.ಎಸ್.ಟಿ. ತಂಡ ನೀಡಿದ ದೂರಿನ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜು ರಾಮಚರಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.