alex Certify ಎಲೆಕ್ಷನ್ ಗೆ JDS ಭರ್ಜರಿ ತಯಾರಿ: 126 ಅಭ್ಯರ್ಥಿಗಳ ಪಟ್ಟಿ ಅಂತಿಮ, ನಿಷ್ಕ್ರಿಯ ಆಕಾಂಕ್ಷಿಗಳಿಗೆ ಕೊಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲೆಕ್ಷನ್ ಗೆ JDS ಭರ್ಜರಿ ತಯಾರಿ: 126 ಅಭ್ಯರ್ಥಿಗಳ ಪಟ್ಟಿ ಅಂತಿಮ, ನಿಷ್ಕ್ರಿಯ ಆಕಾಂಕ್ಷಿಗಳಿಗೆ ಕೊಕ್

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧತೆ ನಡೆಸಿದ್ದು, 126 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅಂತಿಮಗೊಳಿಸಲಿದ್ದಾರೆ.

ಇಂದಿನಿಂದ ಎರಡು ದಿನಗಳ ಕಾಲ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಲಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಪಕ್ಷದ ಪ್ರಮುಖರ ಸಭೆ ನಡೆಯಲಿದೆ. ಜೆಡಿಎಸ್ ಸಂಘಟನಾ ಕಾರ್ಯಾಗಾರ ಆಯೋಜಿಸಲಾಗಿದ್ದು, ಪಕ್ಷದ ಹಾಲಿ ಶಾಸಕರು ಮತ್ತು ಟಿಕೆಟ್ ಆಕಾಂಕ್ಷಿಗಳೊಂದಿಗೆ ಸಭೆ ನಡೆಸಲಾಗುತ್ತದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಶಾಸಕರು, ಆಕಾಂಕ್ಷಿಗಳೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು

ಈಗಾಗಲೇ 126 ಕ್ಷೇತ್ರಗಳ ಬಗ್ಗೆ ವರದಿ ಪಡೆದುಕೊಂಡಿರುವ ಕುಮಾರಸ್ವಾಮಿ ಸಕ್ರಿಯವಾಗಿ ಕೆಲಸ ಮಾಡದ ಆಕಾಂಕ್ಷಿಗಳ ಹೆಸರನ್ನು ಕೈ ಬಿಡುವ ಸಾಧ್ಯತೆ ಇದೆ. ಪಂಚರತ್ನ ರಥಯಾತ್ರೆ ದಿನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...