
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪ ನಿವಾಸದ ಮೇಲೆ ಶುಕ್ರವಾರ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಿರಿಯೂರು ತಾಲೂಕಿನ ಮುಂಗುಸವಳ್ಳಿ ಗ್ರಾಮದ ತೋಟದಲ್ಲಿರುವ ನಿವೃತ್ತ ಇಂಜಿನಿಯರ್ ರವೀಂದ್ರಪ್ಪ ಅವರ ನಿವಾಸದ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೋಟದ ಮನೆಯಿಂದಲೇ ಚುನಾವಣಾ ಕಾರ್ಯ ನಿರ್ವಹಿಸಲಾಗುತ್ತಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ದಾಳಿ ಮಾಡಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ರವೀಂದ್ರಪ್ಪ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.