ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಮತ್ತು ಶಿವಮೊಗ್ಗದ ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾಗಿದೆ.
ಶಿವಮೊಗ್ಗದ ಕೆಆರ್ ಪುರಂ ನಲ್ಲಿರುವ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಅಭ್ಯರ್ಥಿ ಅನುಮತಿ ಪಡೆಯದೇ ಕರಪತ್ರ ಮುದ್ರಿಸಿದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಪ್ರಿಂಟಿಂಗ್ ಪ್ರೆಸ್ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ತಲಾ 5 ಸಾವಿರದಂತೆ ಉರ್ದು, ಕನ್ನಡದಲ್ಲಿ ಕರಪತ್ರ ಮುದ್ರಿಸಲಾಗಿದ್ದು, ಜೆಡಿಎಸ್ ಪಕ್ಷದ ಚಿಹ್ನೆ ಮತ್ತು ಪಕ್ಷದ ನಾಯಕರು, ಅಭ್ಯರ್ಥಿ ಭಾವಚಿತ್ರವಿರುವುದು ಕಂಡು ಬಂದಿದೆ.
ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡಿಲ್ಲ. ಭದ್ರಾವತಿಯ ವ್ಯಕ್ತಿ ಅನುಮತಿ ಪಡೆದುಕೊಂಡಿರುವುದಾಗಿ ಮೌಖಿಕವಾಗಿ ತಿಳಿಸಿದ್ದಾರೆ. ಹಾಗಾಗಿ ಪ್ರಿಂಟ್ ಮಾಡಿರುವುದಾಗಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಹೇಳಿಕೊಂಡಿದ್ದಾರೆ. ಇದು ಚುನಾವಣಾ ನೀತಿ ಸಮಿತಿ ಉಲ್ಲಂಘನೆಯಾಗಿದ್ದು, ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಮತ್ತು ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.