alex Certify ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಆಮಿಷ: ತನಿಖೆಗೆ ಆಯೋಗ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಆಮಿಷ: ತನಿಖೆಗೆ ಆಯೋಗ ಸೂಚನೆ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರಿಗೆ ಚುನಾವಣೆಯಿಂದ ಹಿಂದೆ ಸರಿಯಲು ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ವಿ. ಸೋಮಣ್ಣ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಕುರಿತಾಗಿ ಚುನಾವಣಾ ಆಯೋಗ ತನಿಖೆಗೆ ಸೂಚಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಜೆಡಿಎಸ್ ಅಭ್ಯರ್ಥಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಲು ಆಮಿಷ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಸ್ಥಳೀಯ ಚುನಾವಣಾ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸೋಮಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ಆಮಿಷ ಒಡ್ಡಿದ ಕುರಿತಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದುವರೆಗೂ ನಮಗೆ ಪ್ರತಿಸ್ಪರ್ಧಿ ಅಭ್ಯರ್ಥಿಯಿಂದ ಯಾವುದೇ ದೂರು ಬಂದಿಲ್ಲ. ಆದರೂ ಸತ್ಯಾಸತ್ಯತೆ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಚುನಾವಣೆ ಅಧಿಕಾರಿಗೆ ಸೂಚನೆ ನೀಡಲಾಗಿದೆ. ಇಬ್ಬರು ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿ ಅವರಿಂದ ಪ್ರತಿಕ್ರಿಯೆ ಪಡೆಯಲಾಗುವುದು. ತನಿಖೆ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...