alex Certify ಹಾಸನ ಕ್ಷೇತ್ರದ ಅಭ್ಯರ್ಥಿ ಸೇರಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆಯೊಳಗೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಕ್ಷೇತ್ರದ ಅಭ್ಯರ್ಥಿ ಸೇರಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆಯೊಳಗೆ ಬಿಡುಗಡೆ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ನಾಳೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದೇವೇಗೌಡರು ದೆಹಲಿ ಪ್ರವಾಸದಲ್ಲಿದ್ದು, ಬುಧವಾರ ಸಂಜೆ ವಾಪಸಾಗಲಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರು ಇರುತ್ತದೆ ಎಂದು ತಿಳಿಸಿದ್ದಾರೆ.

ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಒಳಗೊಂಡಂತೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಹಾಸನ ವಿಚಾರವಾಗಿ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಪ್ರಚಾರ ದೊರೆತಿದ್ದು, ಇದರಿಂದ ಪಕ್ಷಕ್ಕೆ ಎರಡರಿಂದ ಮೂರರಷ್ಟು ಮತ ಪ್ರಮಾಣ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...