
ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿದ್ದಾರೆ.
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ವಿರೋಧಿಸಿದ್ದ ಸಿಎಂ ಇಬ್ರಾಹಿಂ ಪ್ರತ್ಯೇಕ ಸಭೆ ನಡೆಸಿದ್ದರು. ಪಕ್ಷದ ನಾಯಕರ ನಡೆಯನ್ನು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ವಿಸರ್ಜಿಸಿ ಅಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ಕೈ ಬಿಟ್ಟು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಸಾರಥ್ಯ ವಹಿಸಲಾಗಿತ್ತು.
ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಇಬ್ರಾಹಿಂಗೆ ಮತ್ತೊಂದು ಶಾಕ್ ನೀಡಲಾಗಿದೆ. ಈಗ ಜೆಡಿಎಸ್ ನಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ.