ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.
ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆಯಿದ್ದು, ಕೋರ್ ಕಮಿಟಿ ಸಭೆ ಬಳಿಕ ಜೆಡಿಎಸ್ ನಾಯಕರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ.
ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಜಿ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ‘ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿ.ಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದರು. ‘ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ. ನಾನು ಪ್ರತ್ಯೇಕವಾಗಿ ಕೋರ್ ಕಮಿಟಿಯನ್ನು ರಚನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಇಬ್ರಾಹಿಂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು.