
ಕಲಬುರಗಿ: ರಾಜ್ಯದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿರುವ ಅಂಶಗಳನ್ನು ಗಮನಿಸಿದಾಗ ವಿಧಾನಸಭೆಗೆ ಅವಧಿಗೂ ಮೊದಲೇ ಚುನಾವಣೆ ನಡೆಯುವ ಸಾಧ್ಯತೆಗಳು ಗೋಚರಿಸಿವೆ. ಯಾವಾಗ ಚುನಾವಣೆ ನಡೆದರೂ ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಗಟ್ಟಿ ಅಂಶಗಳಿಲ್ಲ. ಜನಪ್ರಿಯತೆ ಹಿನ್ನೆಲೆಯಲ್ಲಿ ಬಜೆಟ್ ಮಂಡಿಸಲಾಗಿದೆ ಎಂದು ಟೀಕಿಸಿದ ಅವರು, ಜೆಡಿಎಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಹತ್ತಿರವಾಗಿಲ್ಲ. ನಮಗೆ ಲೆಫ್ಟು ಬೇಡ, ರೈಟೂ ಬೇಡ. ಬಿಜೆಪಿಯೂ ಬೇಡ, ಕಾಂಗ್ರೆಸ್ ಬೇಡ, ನಾವು ನೇರವಾಗಿ ಚುನಾವಣೆ ಎದುರಿಸುತ್ತೇವೆ. ಇದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.