alex Certify ಹಾಸನದಲ್ಲಿ ಫಲಿಸದ ಬಿಜೆಪಿ, ಕಾಂಗ್ರೆಸ್ ಒಳಸಂಚು: ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದಲ್ಲಿ ಫಲಿಸದ ಬಿಜೆಪಿ, ಕಾಂಗ್ರೆಸ್ ಒಳಸಂಚು: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್ ಶಕ್ತಿ ಉಳಿದಿರುವುದು ಹೆಚ್.ಡಿ.ಡಿ. ಕುಟುಂಬದಲ್ಲಿ. ಪಕ್ಷ ಉಳಿಸಲು ಎಲ್ಲಾ ಹೋರಾಟ ನಡೆಯುತ್ತಿದೆ. ಹಾಸನದಲ್ಲಿ ಬಿಜೆಪಿ, ಕಾಂಗ್ರೆಸ್ ಒಳಸಂಚು ಫಲಿಸಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬಗ್ಗೆ ಮಾತನಾಡಲು ಕಾಂಗ್ರೆಸ್, ಬಿಜೆಪಿಗೆ ನೈತಿಕತೆ ಇಲ್ಲ. ಮಂಡ್ಯದಲ್ಲಿ ಬಿಜೆಪಿ ಮತ ಕಾಂಗ್ರೆಸ್ ಪಕ್ಷಕ್ಕೆ ಹೋಗಿದೆ. 2023 ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ ಎಂದರು.

ಜೆಡಿಎಸ್ ವಿರುದ್ಧ ನಿರಂತರ ಅಪಪ್ರಚಾರ ನಡೆಸಲಾಗಿದೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಅಪಪ್ರಚಾರ ಮಾಡಲಾಗಿದ್ದು, ಜೆಡಿಎಸ್ ಪಕ್ಷವನ್ನು ಮುಗಿಸಲು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ಲೋಕಸಭೆ ಚುನಾವಣೆಯಲ್ಲಿ, ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸಂಚು ನಡೆಸಿದವು ಎಂದು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ಮುಖಭಂಗ ಆಗಲ್ಲ. ನಮ್ಮ ಮತಗಳು ನಮಗೆ ಬಂದಿವೆ. ಚುನಾವಣೆಯಲ್ಲಿ ಕೆಲಸ ಮಾಡಿದ ಎಲ್ಲರಿಗೂ ಅಭಿನಂದನೆ. ಮೈತ್ರಿ ಸರ್ಕಾರ ಬೀಳಿಸುವಲ್ಲಿ ಸಿದ್ದಹಸ್ತ ಕೈವಾಡವಿದೆ. 2023ರ ಚುನಾವಣೆ ನಮ್ಮ ಗುರಿ. ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ. ನಮ್ಮನ್ನು ಮುಗಿಸುವ ಕನಸು ನನಸಾಗುವುದಿಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...