alex Certify ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ.

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ ಕೈಗೊಳ್ಳಬೇಕು. ಮುಂದಿನ ಎಲ್ಲ ರಾಜಕೀಯ ಹೋರಾಟಕ್ಕೆ ಕಾರ್ಯಕರ್ತರು ಸಜ್ಜಾಗಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಹೆಚ್.ಡಿ.ಕೆ. ಘೋಷಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷದ ವರಿಷ್ಠರಾದ ದೇವೇಗೌಡರು, ನಾನು ಎಲ್ಲಾ ಕಡೆ ಪ್ರವಾಸ ಮಾಡುವುದು ಕಷ್ಟವಾಗಿದ್ದು, ಮಾರ್ಗದರ್ಶನ ನೀಡುತ್ತೇನೆ. ಜೆಡಿಎಸ್ ಗೆ ಶಕ್ತಿಯಿದ್ದು, ಸಂಘಟನೆಗೆ ಬಲ ತುಂಬಬೇಕಿದೆ. ಯುವಕರನ್ನು ಹೆಚ್ಚಾಗಿ ಪಕ್ಷದಲ್ಲಿ ತೊಡಗಿಸಿಕೊಂಡು ಬದಲಾವಣೆ ತರಬೇಕಿದೆ ಎಂದು ಪಕ್ಷದ ಮುಖಂಡರಿಗೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...