ಬೆಂಗಳೂರು: ಬಿಜೆಪಿಯಲ್ಲಿ ವಿಲೀನವಾಗದೆ ಮಿತ್ರ ಪಕ್ಷವಾಗಲು ಜೆಡಿಎಸ್ ಆಸಕ್ತಿ ತೋರಿದೆ ಎಂದು ಹೇಳಲಾಗಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿಯಲ್ಲಿ ವಿಲೀನವಾಗುವ ಬದಲು ಎನ್.ಡಿ.ಎ. ಸೇರಲು ಆಸಕ್ತಿ ತೋರಿದ್ದಾರೆ.
ವಿಲೀನ ಆಗುವುದಕ್ಕಿಂತ ಮಿತ್ರಪಕ್ಷವಾದರೆ ಸ್ವಂತ ನಿರ್ಧಾರ ಕೈಗೊಳ್ಳಲು ಅನುಕೂಲವಾಗುತ್ತದೆ. ಅಸ್ತಿತ್ವವೂ ಉಳಿಯುತ್ತದೆ. ಅಸಮಾಧಾನವಾದ ಸಂದರ್ಭದಲ್ಲಿ ಮೈತ್ರಿಕೂಟದಿಂದ ಹೊರಬರಲು ಅವಕಾಶವಿರುತ್ತದೆ ಎಂಬ ಲೆಕ್ಕಾಚಾರ ಇದೆ.
ಕುಮಾರಸ್ವಾಮಿ ಅವರನ್ನು ರಾಜ್ಯಸಭೆ ಸದಸ್ಯರಾಗಿ ಕೇಂದ್ರ ಸಚಿವರನ್ನಾಗಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದೆದ್ದಿರುವ ಕುಮಾರಸ್ವಾಮಿ ಎನ್.ಡಿ.ಎ. ಮೈತ್ರಿಕೂಟ ಸೇರಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.