alex Certify ಹಾಸನ ಜೆಡಿಎಸ್ ಟಿಕೆಟ್ ಕುತೂಹಲಕ್ಕೆ ಇಂದು ತೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಜೆಡಿಎಸ್ ಟಿಕೆಟ್ ಕುತೂಹಲಕ್ಕೆ ಇಂದು ತೆರೆ

ಬೆಂಗಳೂರು: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಭಾರಿ ಪೈಪೋಟಿ ಏರ್ಪಟ್ಟಿದೆ. ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಕೆಂದು ಹೆಚ್.ಡಿ. ರೇವಣ್ಣ ಪಟ್ಟು ಹಿಡಿದಿದ್ದಾರೆ. ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಪುತ್ರ ಸ್ವರೂಪ್ ಅವರಿಗೆ ಟಿಕೆಟ್ ನೀಡಬೇಕೆಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ಅವರು ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭಾನುವಾರ ರಾತ್ರಿ ಸಮಾಲೋಚನೆ ನಡೆಸಿದ್ದಾರೆ. ತಮಗೆ ಟಿಕೆಟ್ ನೀಡಬೇಕೆಂದು ಭವಾನಿ ರೇವಣ್ಣ ಪಟ್ಟು ಹಿಡಿದಿದ್ದು, ಇದಕ್ಕೆ ದೇವೇಗೌಡರು ಒಪ್ಪಿಲ್ಲ. ಸದ್ಯಕ್ಕೆ ಭವಾನಿ ರೇವಣ್ಣ ಸ್ಪರ್ಧೆ ಬೇಡವೆಂದು ದೇವೇಗೌಡರು ಹೇಳಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಸೋಮವಾರ ಇಲ್ಲವೇ ಒಂದೆರಡು ದಿನಗಳಲ್ಲಿ ಪ್ರಕಟವಾಗುವ ನೀರಿಕ್ಷೆ ಇದೆ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಬಗೆಹರಿದಲ್ಲಿ ಇವತ್ತೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...