alex Certify ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಜೆಡಿಎಸ್ ಪ್ರಚಾರ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಜೆಡಿಎಸ್ ಪ್ರಚಾರ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಪ್ರಚಾರ ಮುಂದೂಡಲಾಗಿದೆ.

ವಿಧಾನಸಭೆ ಚುನಾವಣೆಗೆ ನಿರಂತರ ಪ್ರಚಾರ ಕೈಗೊಂಡಿದ್ದ ಕುಮಾರಸ್ವಾಮಿ ಅವರಿಗೆ ಜ್ವರ ಬಂದಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರದ ಪ್ರಚಾರ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಶನಿವಾರ ರಾತ್ರಿ ವೈದ್ಯರ ಸಲಹೆ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರದಿಂದ ನಿರಂತರವಾಗಿ ಜೆಡಿಎಸ್ ಪ್ರಚಾರದಲ್ಲಿ ತೊಡಗಿಕೊಳ್ಳಲು ಅವರು ನಿರ್ಧರಿಸಿದ್ದರು. ಭಾನುವಾರ ನಿಖಿಲ್ ಸ್ಪರ್ಧಿಸಿರುವ ರಾಮನಗರ ಮತ್ತು ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪ್ರಚಾರ ಕೈಗೊಂಡಿದ್ದರು. ಜ್ವರ ತೀವ್ರಗೊಂಡ ಕಾರಣ ಪ್ರಚಾರ ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...