ಬೆಂಗಳೂರು: ಚೆನ್ನೈನಲ್ಲಿ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೊಳಗಾದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಯವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಮತ್ತು ಅಮೆರಿಕದಿಂದ ಆಗಮಿಸಿದ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನೆರವೇರಿಸಿದೆ.
ಐಸಿಯು ನಿಂದ ವಾರ್ಡ್ ಗೆ ಸ್ಥಳಾಂತರ ಮಾಡಿ ಕುಮಾರಸ್ವಾಮಿ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಭಾನುವಾರ ಬೆಳಗ್ಗೆ ಡಿಸ್ಚಾರ್ಜ್ ಆಗಲಿರುವ ಕುಮಾರಸ್ವಾಮಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದು, ಜೆಪಿ ನಗರ ನಿವಾಸಕ್ಕೆ ತೆರಳಲಿದ್ದಾರೆ. ವಿಶ್ರಾಂತಿ ಪಡೆದು ಕೆಲ ದಿನಗಳ ನಂತರ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.