ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ ಎನ್.ವೆಂಕಟೇಶ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಧನು ಅಲಿಯಾಸ್ ಧನರಾಜ್ ಹಾಗೂ ಸತೀಶ್ ಬಂಧಿತ ಆರೋಪಿಗಳು. ಹಳೇ ದ್ವೇಷದ ಕಾರಣಕ್ಕೆ ಹತ್ಯೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್ ಪಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.
ವೆಂಕಟೇಶ್ ತೆರಳುತ್ತಿದ್ದ ಸ್ಕೂಟಿಯನ್ನು ಅಡ್ಡಗಟ್ಟಿದ್ದ ಧನರಾಜ್ ಹಾಗೂ ಸತೀಶ್ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ಬಳಿಕ ಹೊಟ್ಟೆ, ಮುಖಕ್ಕೆ ಮೂರು ಬಾರಿ ಇರಿದು, ಕೈ ಕಟ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಸ್ಥಳದಿಂದ ಎಸ್ಕೇಪ್ ಆದ ಆರೋಪಿಗಳು ಬೆಂಗಳೂರಿಗೆ ಬಂದು ರೂಂ ಮಾಡಿಕೊಂಡಿದ್ದರು. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.