ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಜು ಅವರ ಮಾತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ಸೈಲೆಂಟಾಗಿದ್ದಾರೆ. ಕೆಲಸ ಮಾಡದೇ ಇಷ್ಟು ದಿನ ಕತ್ತೆ ಕಾಯ್ತಾ ಇದ್ಯಾ ನೀನು ಎಂದು ಗರಂ ಆಗಿದ್ದಾರೆ. ನೀನು ಕೆಲಸ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದು, ಸರಿಯಾಗಿ ಕೆಲಸ ಮಾಡು ಇಲ್ಲವಾದರೆ ಜಾಗ ಖಾಲಿ ಮಾಡು ಎಂದು ಹೇಳಿದ್ದಾರೆ.
ರಸ್ತೆ ಅಗಲೀಕರಣ ಸಂಬಂಧ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಬಗ್ಗೆ ಆಕ್ಷೇಪಿಸಿದ್ದಾರೆ. ಅರ್ಧಕ್ಕೆ ಕಾಮಗಾರಿ ನಿಂತಿದ್ದ ಆರೋಪ ಹಿನ್ನೆಲೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.