alex Certify BREAKING: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಜೆಡಿಎಸ್ ಶಾಸಕ ಪ್ರತ್ಯಕ್ಷ: ರಾಹುಲ್ ಗಾಂಧಿಯೊಂದಿಗೆ ಗುಬ್ಬಿ ಶ್ರೀನಿವಾಸ್ ಹೆಜ್ಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಜೆಡಿಎಸ್ ಶಾಸಕ ಪ್ರತ್ಯಕ್ಷ: ರಾಹುಲ್ ಗಾಂಧಿಯೊಂದಿಗೆ ಗುಬ್ಬಿ ಶ್ರೀನಿವಾಸ್ ಹೆಜ್ಜೆ

ತುಮಕೂರು: ಸಕ್ಕರೆ ನಾಡು ಮಂಡ್ಯದಿಂದ ಕಲ್ಪತರು ನಾಡು ತುಮಕೂರು ಜಿಲ್ಲೆಗೆ ಎಂಟ್ರಿಯಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲೆ ತುರುವೇಕೆರೆಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ತುರುವೇಕೆರೆಯ ಕಾಸ್ಮೋ ಪಾಲಿಟನ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಂದುವರೆದಿದ್ದು ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿ ಪಾದಯಾತ್ರೆ ಸಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ಮುಂದುವರೆದಿದ್ದು, ರಣದೀಪ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್, ಸಿದ್ಧರಾಮಯ್ಯ, ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಗುಬ್ಬಿ ಶಾಸಕ ಶ್ರೀನಿವಾಸ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಶಾಸಕ ಶ್ರೀನಿವಾಸ್ ಭಾಗಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಮಾಯಸಂದ್ರದಲ್ಲಿ ಪಾದಯಾತ್ರೆ ಮುಂದುವರೆದಿದ್ದು, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಭಾಗಿಯಾಗಿದ್ದಾರೆ. ಜೆಡಿಎಸ್ ಪಕ್ಷದ ಉಚ್ಛಾಟಿತ ಶಾಸಕ ಶ್ರೀನಿವಾಸ್ ಅವರೊಂದಿಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...