ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ -ಜೆಡಿಎಸ್ ಮೈತ್ರಿ ಬಳಿಕ ಕಾಂಗ್ರೆಸ್ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಕಾರ್ಯತಂತ್ರ ಚುರುಕುಗೊಳಿಸಿದೆ.
ಜೆಡಿಎಸ್ ಶಕ್ತಿ ಕುಂದಿಸುವ ನಿಟ್ಟಿನಲ್ಲಿ ಆಪರೇಷನ್ ಹಸ್ತ ಚುರುಕುಗೊಳಿಸಲಾಗಿದೆ. 10 ಜೆಡಿಎಸ್ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ವದಂತಿಗಳು ಹರಡಿವೆ. ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದ ಹಿರಿಯ ಶಾಸಕ ಜಿ.ಟಿ. ದೇವೇಗೌಡರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ಗಂಟೆ ಸಮಾಲೋಚನೆ ನಡೆಸಿದ್ದಾರೆ.
ದೊಡ್ಡ ಪ್ರಮಾಣದಲ್ಲಿ ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದ್ದು, ಇದರ ಭಾಗವಾಗಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜೆ.ಟಿ. ದೇವೇಗೌಡರನ್ನು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚಿಸಿದ್ದಾರೆ. 10ಕ್ಕಿಂತ ಹೆಚ್ಚು ಶಾಸಕರನ್ನು ಸೆಳೆಯಲು ಚರ್ಚೆ ನಡೆದಿದೆ ಎನ್ನಲಾಗಿದೆ.