ಮೈಸೂರು: ಜೆಡಿಎಸ್ ಪಕ್ಷದಿಂದ ದೂರವಾದಂರಿರುವ ಶಾಸಕ ಜಿ.ಟಿ. ದೇವೇಗೌಡ ಪಕ್ಷೇತರರಾಗಿ ಸ್ಪರ್ಧಿಸುವ ಇಂಗಿತ ತೋರಿದ್ದಾರೆ.
ಕಳೆದ ಎರಡು ವರ್ಷಗಳಿಂದ ಜೆಡಿಎಸ್ ಸಭೆಗಳಲ್ಲಿ ಅವರು ಭಾಗವಹಿಸಿಲ್ಲ. ಮುಂದೆ ಯಾವ ಪಕ್ಷ ಸೇರಬೇಕೆಂದು ಇನ್ನೂ ತೀರ್ಮಾನಿಸಿಲ್ಲ. ಪಕ್ಷೇತರರಾಗಿ ಸ್ಪರ್ಧಿಸಿದ್ದರೂ ಅಚ್ಚರಿಪಡಬೇಕಿಲ್ಲ.
ಜಿ.ಟಿ. ದೇವೇಗೌಡ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಾನು ಯಾವ ಪಕ್ಷ ಸೇರಬೇಕೆಂದು ಇನ್ನೂ ತೀರ್ಮಾನಿಸಿಲ್ಲ. ಪಕ್ಷೇತರನಾಗಿ ನಿಂತರೂ ಅಚ್ಚರಿಪಡಬೇಕಿಲ್ಲ ಎಂದು ಹೇಳಿದ್ದಾರೆ.
ಕ್ಷೇತ್ರದ ಜನರು ನಮಗೆ ಪಕ್ಷ ಬೇಡ. ಜಿ.ಟಿ. ದೇವೇಗೌಡರು ಬೇಕು ಎಂದು ಹೇಳುತ್ತಿದ್ದಾರೆ. ನಾನು ಮತ್ತು ನನ್ನ ಪುತ್ರ ಹರೀಶ್ ಗೌಡ ಪಕ್ಷೇತರರಾಗಿ ಸ್ಪರ್ಧಿಸಿದರೂರು ಗೆಲ್ಲುತ್ತೇವೆ ಎನ್ನುವ ಜನರ ಪ್ರೀತಿ ವಿಶ್ವಾಸದಿಂದಾಗಿ ನಮಗೆ ಧೈರ್ಯ ಬಂದಿದೆ ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಪಕ್ಷದಲ್ಲೇ ಉಳಿಸಿಕೊಳ್ಳುವ ಮಾತನಾಡಿದ್ದಾರೆ. 2023ಕ್ಕೆ ಪಕ್ಷ ಅಧಿಕಾರಕ್ಕೆ ತಂದು ನಿವೃತ್ತಿಯಾಗುವುದಾಗಿ ಹೇಳಿದ್ದಾರೆ. ಆದರೆ, ನಾನು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪಕ್ಷೇತರನಾಗಿ ನಿಂತರೂ ಅಚ್ಚರಿಪಡಬೇಕಿಲ್ಲ ಎಂದು ತಿಳಿಸಿದ್ದಾರೆ.