
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸೋಲಿಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಹಾಗೂ ನಮ್ಮ ಪಕ್ಷದವರೂ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವುದಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿರುವುದು ದೇಶಕ್ಕೆ ತಿಳಿದ ವಿಚಾರವಾಗಿದೆ. ಸಿದ್ದರಾಮಯ್ಯನವರಿಗೆ ಈಗ ಜ್ಞಾನೋದಯವಾದಂತಿದೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಸಿದ್ಧರಾಮಯ್ಯನವರನ್ನು ಸೋಲಿಸಲು ಜೆಡಿಎಸ್ ಗೆ ಸಹಾಯ ಮಾಡಿದ್ದು ನಿಜ. ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೆ, ಅನೇಕ ಕ್ಷೇತ್ರಗಳಲ್ಲಿಯೂ ಒಡಂಬಡಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದೇವೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದು ಹೇಳಿದ್ದಾರೆ.