
ಬೆಂಗಳೂರು: ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದೆ.
ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಮಂಜೂರಾಗಿದ್ದ ಮನೆಗಳನ್ನು ತಡೆದು ಇದೀಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದು ಸಹಜವಾಗಿ ಜೆಡಿಎಸ್ ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ.
ತುರುವೆಕೆರೆ ಕ್ಷೇತ್ರಕ್ಕೆ ಮಂಜೂರಾಗಿದ್ದ 3,375 ಮನೆಗಳನ್ನು ಕುಣಿಗಲ್ ಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗಿದೆ. ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ಕಾರ್ಯವೈಖರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.