alex Certify BIG BREAKING: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಲ್ಲಿ ರೋಚಕ ಫಲಿತಾಂಶ, ಕೊನೆಗೂ ಜೆಡಿಎಸ್ ಗೆ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಲ್ಲಿ ರೋಚಕ ಫಲಿತಾಂಶ, ಕೊನೆಗೂ ಜೆಡಿಎಸ್ ಗೆ ಜಯ

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು –ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಜಯಗಳಿಸಿದ್ದಾರೆ. ಎಲಿಮಿನೇಷನ್ ಸುತ್ತಿನಲ್ಲಿ ಸಿ.ಎನ್. ಮಂಜೇಗೌಡ ಜಯಗಳಿಸಿದ್ದಾರೆ. ಎರಡನೇ ಸುತ್ತಿನಲ್ಲಿಯೂ ಮಂಜೇಗೌಡರಿಗೆ ಜಯ ಸಿಕ್ಕಿರಲಿಲ್ಲ. ಎಲಿಮಿನೇಷನ್ ಸುತ್ತಿನಲ್ಲಿ ಜಯಗಳಿಸಿದ್ದಾರೆ.

ಈ ಮೂಲಕ ತೀವ್ರ ಕುತೂಹಲ ಕ್ಷೇತ್ರ ಕೆರಳಿಸಿದ್ದ ಮೈಸೂರು –ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಗೆದ್ದಿದ್ದಾರೆ. ಬಿಜೆಪಿಯ ರಘು ಕೌಟಿಲ್ಯ ವಿರುದ್ಧ ಮಂಜೇಗೌಡ ಗೆಲುವು ಸಾಧಿಸಿದ್ದಾರೆ. ಮೊದಲ  ಪ್ರಾಶಸ್ತ್ಯದ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ತಿಮ್ಮಯ್ಯ ಗೆಲುವು ಸಾಧಿಸಿದ್ದರು.

ಎರಡನೇ ಪ್ರಾಶಸ್ತ್ಯದ ಸುತ್ತಿನಲ್ಲಿಯೂ ಮಂಜೇಗೌಡರಿಗೆ ಜಯ ದೊರೆತಿರಲಿಲ್ಲ. ಎಲಿಮಿನೇಷನ್ ರೌಂಡ್ ನಲ್ಲಿ ಮಂಜೇಗೌಡ ಗೆಲವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ತಲಾ 11 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು, ಬೆಳಗಾವಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...