ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ.
ಎನ್.ಡಿ.ಎ. ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ.
ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ಧ್ವನಿ ಎತ್ತಿದ್ದರು. ಹೀಗಾಗಿ ಎನ್.ಡಿ.ಎ. ಮಹಿಳಾ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ತೀರ್ಮಾನಿಸಿದ್ದೇವೆ. ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷ ಯಾವುದೆಂದು ನೋಡುವುದಿಲ್ಲ. ದ್ರೌಪದಿ ಮುರ್ಮು ಅವರು ಆದಿವಾಸಿ ಜನಾಂಗದವರಾಗಿದ್ದಾರೆ. ಅವರನ್ನು ಬೆಂಬಲಿಸುತ್ತೇವೆ ಎಂದು ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪುರ ಹೇಳಿದ್ದಾರೆ.
ಇತ್ತೀಚೆಗೆ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದ ದ್ರೌಪದಿ ಮುರ್ಮು ಅವರು ಬೆಂಬಲ ಕೋರಿದ್ದರು.