alex Certify BIG NEWS: ಜೆಡಿಎಸ್ ಮಹತ್ವದ ನಿರ್ಧಾರ: NDA, INDIA ಸೇರದೆ ಸ್ವತಂತ್ರ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಮಹತ್ವದ ನಿರ್ಧಾರ: NDA, INDIA ಸೇರದೆ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ಎನ್.ಡಿ.ಎ. ಅಥವಾ ‘ಇಂಡಿಯಾ’ ಮೈತ್ರಿಕೂಟ ಜೊತೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಗುರುವಾರ ತಡರಾತ್ರಿವರೆಗೂ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. ಅಥವಾ ಇಂಡಿಯಾ ಮೈತ್ರಿಕೂಟದೊಂದಿಗೆ ಕೈಜೋಡಿಸದೇ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ರಾಜ್ಯದ ಜನರ ಹಿತದೃಷ್ಟಿಯಿಂದ ಪ್ರಾದೇಶಿಕ ಪಕ್ಷ ಉಳಿಸಿಕೊಂಡು ಹೋಗುವ ಅಗತ್ಯವಿದೆ. ಶಾಸಕಾಂಗ ಸಭೆಯಲ್ಲಿ ಇದನ್ನು ನಾನು ಪ್ರಸ್ತಾಪಿಸಿದ್ದೇನೆ. ರಾಷ್ಟ್ರ ರಾಜಕಾರಣ ಕೂಡ ನನಗೆ ಗೊತ್ತಿದೆ. ರಾಜ್ಯ ರಾಜಕಾರಣವನ್ನೂ ನಾನು ಬಲ್ಲೆ. ಜೀವನದುದ್ದಕ್ಕೂ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಮುಂದೆ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್.ಡಿ.ಎ. ಮುಂದಿನ ಸಭೆಗೆ ಹೋಗುವ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ಯಾವುದರ ಅಗತ್ಯವಿಲ್ಲ. ನಾವು ಸ್ವತಂತ್ರವಾಗಿ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...