ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಗಾಗಿ ಮಾಋಛ ನಿಂದ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠರಾದ ಹೆಚ್.ಢೀ. ದೇವೇಗೌಡರು ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುತ್ತೇನೆ. ಜಿಲ್ಲೆಗಳಿಗೂ ಪ್ರವಾಸ ಕೈಗೊಂಡು ಕಾರ್ಯಕರ್ತರು ,ಮುಖಂಡರೊಂದಿಗೆ ಪಕ್ಷ ಸಂಘಟಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಢೀ. ಕುಮಾರಸ್ವಾಮಿ ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ. ನಾನು ಮತ್ತು ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲಾ ಹಿರಿಯರು, ಕಿರಿಯರೊಂದಿಗೆ ಸೇರಿ ಪಕ್ಷದ ಕಾರ್ಯಕರ್ತರೊಂದಿಗೆ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುತ್ತೇವೆ .ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬೆಂಗಳೂರು, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.