BIG NEWS: ಜೆಡಿಎಸ್ ಬಲಪಡಿಸಲು ಸಿದ್ಧತೆ; 20 ನಾಯಕರ ಸಮಿತಿ ರಚನೆ

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗದ ಕಾರಣ ಮಂಕಾಗಿದ್ದ ಜೆಡಿಎಸ್ ಪಾಳೆಯದಲ್ಲಿ ಈಗ ಮತ್ತೆ ಹೊಸ ಹುರುಪು ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ 20 ಪ್ರಮುಖ ನಾಯಕರ ಸಮಿತಿಯನ್ನು ರಚಿಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಸೋಮವಾರದಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ನೂತನವಾಗಿ ರಚಿಸಲಾಗಿರುವ ಸಮಿತಿಯ ನೇತೃತ್ವವನ್ನು ಶಾಸಕ ಜಿ.ಟಿ. ದೇವೇಗೌಡ ವಹಿಸಲಿದ್ದಾರೆ.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಮಾಜಿ ಶಾಸಕ ವೈ ಎಸ್ ವಿ ದತ್ತ ಹೊಸ ಸಮಿತಿಗೆ ಸಂಚಾಲಕರಾಗಿದ್ದಾರೆ. ಆಗಸ್ಟ್ 15ರ ಬಳಿಕ ಸಮಿತಿ ಸದಸ್ಯರು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಪಕ್ಷಕ್ಕೆ ಚೈತನ್ಯ ತುಂಬಲಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read