ಬೆಂಗಳೂರು: ಪಕ್ಷ ಸಂಘಟನೆಯ ಗುರಿ ಮತ್ತು ಬಿಜೆಪಿ ಜತೆ ಮೈತ್ರಿ ಕುರಿತಾಗಿ ಇಂದು ನಡೆಯಲಿರುವ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಮುಂಬರುವ ಲೋಕಸಭೆ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು.
ಇದೇ ಸಂದರ್ಭದಲ್ಲಿ ಬಿಜೆಪಿ ಜತೆ ಮೈತ್ರಿ ಬಗ್ಗೆ ನಿಲುವು ಪ್ರಕಟಿಸುವ ಸಾಧ್ಯತೆ ಇದೆ. ಪಕ್ಷದ ನಾಯಕರಾದ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಜಿ.ಟಿ. ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ರಾಜ್ಯ ಸರ್ಕಾರದ ಜನ ವಿರೋಧಿ, ರೈತ ವಿರೋಧಿ ನಿಲುವು, ವೈಫಲ್ಯಗಳ ವಿರುದ್ಧ ಹೋರಾಟದ ರೂಪುರೇಷೆ ಸಿದ್ದಪಡಿಸಲು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪಕ್ಷದ ಸಂಘಟನೆ ಮತ್ತು ಚುನಾವಣೆ ಸಿದ್ಧತೆಯ ಬಗ್ಗೆ ನಾಯಕರು ಮಾರ್ಗದರ್ಶನ ಮಾಡಲಿದ್ದಾರೆ.