alex Certify ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಪಕ್ಷನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಇನ್ನು ಮುಂದೆ ಜೆಡಿಎಸ್ ನೊಂದಿಗೆ ಕಾಂಗ್ರೆಸ್ ಮೈತ್ರಿ ಸಾಧ್ಯವೇ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಏನೇ ಹೇಳಿದರೂ ಅಷ್ಟೇ. ನಾನೇ ಹೇಳುತ್ತಿದ್ದೇನೆ ಇನ್ನು ಜೆಡಿಎಸ್ ಜೊತೆ ಯಾವುದೇ ಮೈತ್ರಿ ಇಲ್ಲ. ಮೈಸೂರು ಚುನಾವಣೆ ವಿಚಾರವಾಗಿರಲಿ, ಬೇರೆ ಯಾವುದೇ ವಿಚಾರವಾಗಲಿ ಜೆಡಿಎಸ್ ಜೊತೆ ಮೈತ್ರಿ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಇದರ ಬಗ್ಗೆ ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ., ಮೈತ್ರಿ ಮಾಡಿಕೊಳ್ಳಲು ನಾನು ಅವರ ಮನೆಗೆ ಹೋಗಿಲ್ಲ. ಮೈತ್ರಿ ಮಾಡಿಕೊಳ್ಳಲು ನಾನು ಅವರ ಮನೆಬಾಗಿಲಿಗೆ ಅರ್ಜಿ ಹಾಕಿಕೊಂಡು ಹೋಗಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...