ಬೆಂಗಳೂರು : ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು.
ರಾಜ್ಯ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ಮಾನ್ಯ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಯಿತಲ್ಲದೆ; ಭಾರತ ಸರಕಾರದಿಂದ ಬರ ಪರಿಹಾರ ಕಾರ್ಯಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿಸಲು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂಬ ನಮ್ಮ ಮನವಿಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಹಾಜರಿದ್ದರು.