alex Certify ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಿಸಿದ ಜೆಡಿಎಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಿಸಿದ ಜೆಡಿಎಸ್

ಬೆಂಗಳೂರು : ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌  ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು.

ರಾಜ್ಯ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ಮಾನ್ಯ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಯಿತಲ್ಲದೆ;  ಭಾರತ ಸರಕಾರದಿಂದ ಬರ ಪರಿಹಾರ ಕಾರ್ಯಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿಸಲು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂಬ ನಮ್ಮ ಮನವಿಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಶಾಸಕರು,  ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಹಾಜರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...