ಬೆಂಗಳೂರು : ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಅದ್ರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸುಮ್ಮನೇ ನಾಟಕೀಯ ಹೇಳಿಕೆ ಇದು. ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡಲು ಹೇಳಿದ್ದಾರೆ. ಯಾರೂ ಗೊಂದಲ ಮಾಡಿಕೊಳ್ಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ವಿಪಕ್ಷ ನಾಯಕರಾಗುವುದಕ್ಕೆ ಬಿಜೆಪಿಯವರೆಲ್ಲಾ ಅಸಮರ್ಥರಾ?ಇವರಿಗೆ ವಿರೋಧ ಪಕ್ಷದ ನಾಯಕನಾಗುವ ಸಾಮರ್ಥ್ಯ ಇಲ್ವಾ? ಈಗ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಅಂತ ಬಿಂಬಿಸಿದ್ದಾರೆ ಎಂದು ಹೇಳಿದ್ದಾರೆ.