
ತುಮಕೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಂದಾಗುತ್ತಿದ್ದಂತೆ ಜೆಡಿಎಸ್ ನ ಹಲವು ಹಾಲಿ ಹಾಗೂ ಮಾಜಿ ಶಾಸಕರು ಬಹಿರಂಗ ಅಸಮಾಧಾನ ಹೊರ ಹಾಕಿದ್ದು, ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಜೆಡಿಎಸ್ ನ ಕೆಲ ಮುಖಂಡರು ಪಕ್ಷಕೆ ಗುಡ್ ಬೈ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಘೋಷಿಸಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರು ಜೆಡಿಎಸ್ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪ್ರತ್ಯೇಕ ಸಭೆಗಳನ್ನು ನಡೆಸಿದ್ದು, ಮುಂದಿನ ನಿರ್ಧಾರಗಳ ಬಗ್ಗೆ ಚರ್ಚಿಸಿದ್ದಾರೆ. ಈ ಮಧ್ಯೆ ತುಮಕೂರು ಮಾಜಿ ಶಾಸಕ, ಅಲ್ಪಸಂಖ್ಯಾತ ಮುಖಂಡ ಶಫಿ ಅಹಮದ್ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ತೊರೆದಿರುವ ಶಫಿ ಅಹಮದ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.