ಬಿಹಾರ : ಬಿಹಾರದಲ್ಲಿ ಜೆಡಿಯು-ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಹಾರದ ಪಾಟ್ನಾ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 9 ನೇ ಬಾರಿಗೆ ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಬಣಕ್ಕೆ ಸೇರಿದ ನಂತರ ನಿತೀಶ್ ಕುಮಾರ್ 9 ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ ನಂತರ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.