ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಬಾಕಿ ಇದೇ ಅಷ್ಟೇ. ಈ ವೇಳೆ ಮಣಿಪುರದಿಂದ ಮತ್ತೊಂದು ಚುನಾವಣಾ ಪೂರ್ವ ಹಿಂಸಾಚಾರದ ಪ್ರಕರಣ ಮುನ್ನೆಲೆಗೆ ಬಂದಿದೆ.
ಭಾನುವಾರದಂದು ನಡೆದ ಘಟನೆಯಲ್ಲಿ, ಪಶ್ಚಿಮ ಇಂಫಾಲದ ಕ್ಷೇತ್ರಗಾವ್ ಕ್ಷೇತ್ರದ ಜೆಡಿಯು ಅಭ್ಯರ್ಥಿ ವಹೆಂಗ್‌ಬಾಮ್ ರೋಜಿತ್ ಮೇಲೆ, ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆಂದು ತಿಳಿದು ಬಂದಿದೆ.
ರೋಜಿತ್ ಅವರು ನಹರೂಪ್ ಮಖಾಪತ್‌ನಲ್ಲಿ ಮಧ್ಯರಾತ್ರಿ 1:30 ರ ಸುಮಾರಿಗೆ ಆ ಪ್ರದೇಶದ ಮತ್ತು ಸುತ್ತಮುತ್ತಲಿನ ಮಹಿಳಾ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುವ ಕೆಲ ಸಂಘಟನೆಗಳನ್ನು ಭೇಟಿ ಮಾಡುತ್ತಿದ್ದಾಗ ಘಟನೆ ನಡೆದಿದೆ ಎಂದು ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯಲ್ಲಿ ತಿಳಿದು ಬಂದಿದೆ.
ರಷ್ಯಾ –ಉಕ್ರೇನ್ ಬಿಕ್ಕಟ್ಟಿನ ನಡುವೆ ಪುಟಿನ್ ಗೆ ಶಾಕ್
ಗುಂಡು ಹಾರಿಸಿರುವುದರಿಂದ ರೋಜಿತ್ ಅವರ ಎದೆಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಧ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಚುನಾವಣಾ ಆಯೋಗದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸೋಮವಾರದಂದು ಮಣಿಪುರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿ “ಕ್ಷೇತ್ರಗಾವ್” ಕೂಡ ಸೇರಿದೆ. ದಾಳಿ ಹಿನ್ನೆಲೆಯಲ್ಲಿ ಆಸ್ಪತ್ರೆ ಹಾಗೂ ಕ್ಷೇತ್ರಗಾವ್ ಕ್ಷೇತ್ರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.