ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ ನಂತರ, ಬಿಜೆಪಿಗೆ ಬೆಂಬಲ ನೀಡುವ ಪ್ರತಿಯಾಗಿ ಜೆಡಿಯು ರೈಲು, ಹಣಕಾಸು ಮತ್ತು ಕೃಷಿ ಸಚಿವಾಲಯಗಳನ್ನು ಕೋರಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ ನಂತರ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಟಿಡಿಪಿ ಎನ್ಡಿಎ ಗೆ ಬೆಂಬಲ ನೀಡಲಿದೆ ಎಂದು ಘೋಷಿಸಿದರು.
ಇದರ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಬದ್ಧ ವೈರಿ ಆರ್ಜೆಡಿಯ ತೇಜಸ್ವಿ ಯಾದವ್ ಪಾಟ್ನಾ ವಿಮಾನ ನಿಲ್ದಾಣದಿಂದ ಒಂದೇ ವಿಮಾನದಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿದ್ದರು. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.