ಬೆಂಗಳೂರು: ಸಿಇಟಿ ಪರೀಕ್ಷೆಗೆ ಇಂದಿನಿಂದ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಜೂನ್ 15 ರ ಮಧ್ಯಾಹ್ನ 12 ಗಂಟೆಯಿಂದ ನೋಂದಣಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜುಲೈ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಜುಲೈ 13 ಕೊನೆಯ ದಿನವಾಗಿದೆ. ಜುಲೈ 14 ರಿಂದ 20 ರವರೆಗೆ ವಿಶೇಷ ವರ್ಗಗಳ ಮೂಲ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದು.
ಜುಲೈ 19 ರಿಂದ 22 ರ ವರೆಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ. ಆಗಸ್ಟ್ 13 ರಂದು ಬೆಳಗ್ಗೆ 11 ಗಂಟೆಯಿಂದ ಸಿಇಟಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೆಡಿಕಲ್, ಡೆಂಟಲ್, ಆಯುರ್ವೇದ ಯುನಾನಿ, ಹೋಮಿಯೋಪತಿ ಸೀಟುಗಳ ಪ್ರವೇಶಕ್ಕೆ ಅಭ್ಯರ್ಥಿಗಳು ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು. ಆರ್ಕಿಟೆಕ್ಚರ್ ಸೀಟುಗಳ ಪ್ರವೇಶಕ್ಕೆ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸುವ ನಾಟಾ ಪರೀಕ್ಷೆ ಅಥವಾ ಜೆಇಇ ಪೇಪರ್ 2 ಪರೀಕ್ಷೆಯಲ್ಲಿ ಕಡ್ಡಾಯವಾಗಿ ಅರ್ಹತೆ ಪಡೆದುಕೊಳ್ಳಬೇಕು. ವಿವರಗಳಿಗಾಗಿ www.kea.kar.nic.in ಸಂಪರ್ಕಿಸಬಹುದಾಗಿದೆ.