ನವದೆಹಲಿ: ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.
ಅದೇ ರೀತಿ ಜೆಇಇ ಮುಖ್ಯ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಪರೀಕ್ಷೆ ಮುಂದೂಡಲು ತೀರ್ಮಾನ ಕೈಗೊಳ್ಳಲಾಗಿದೆ.
ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದ್ದು, 15 ದಿನಗಳ ಮೊದಲೇ ಮುಂದೂಡಿಕೆಯಾದ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಈ ಮೊದಲು ಎರಡು ಸೆಷನ್ ನಡೆದು ಏಪ್ರಿಲ್ 27, 28, 30 ರಂದು ಮುಖ್ಯ ಪರೀಕ್ಷೆ ನಿಗದಿಪಡಿಸಲಾಗಿತ್ತು. ಕೊರೋನಾ ಹೆಚ್ಚಳದ ಕಾರಣ ಮುಂದೂಡಲಾಗಿದೆ.