ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮತ್ತು ಉಪಾಧ್ಯಕ್ಷರಾಗಿ ಜಯಗಳಿಸಿದ ಕಮಲಾ ಹ್ಯಾರಿಸ್ ಅವರಿಗೆ ಈಗಲೇ ಶುಭಾಶಯ ಹೇಳಲು ರಷ್ಯಾ ಮತ್ತು ಚೀನಾ ನಿರಾಕರಿಸಿವೆ.
ಬೈಡೆನ್, ಕಮಲಾ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೈಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಅವರಿಗೆ ಶುಭಾಶಯ ಹೇಳಿದ್ದಾರೆ. ಆದರೆ, ಫಲಿತಾಂಶ ಅಧಿಕೃತವಾಗಿ ಪ್ರಕಟವಾಗದ ಹಿನ್ನೆಲೆಯಲ್ಲಿ ಚೀನಾ ಮತ್ತು ರಷ್ಯಾ ಶುಭಾಶಯ ಹೇಳಿಲ್ಲ. ಅಮೆರಿಕ ಅಧ್ಯಕ್ಷ ಚುನಾವಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗುವವರೆಗೆ ಅಭಿನಂದನೆ ಸಲ್ಲಿಸುವುದಿಲ್ಲ ಎಂದು ರಷ್ಯಾ, ಚೀನಾ ಹೇಳಿವೆ.