ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್ ನಲ್ಲಿ ದರೋಡೆ ನಡೆದಿದ್ದು, ಗುಂಡು ಹಾರಿಸಿದ ಖದೀಮರು ಕೆಜಿಗಟ್ಟಲೇ ಚಿನ್ನ ಕಳ್ಳತನ ಮಾಡಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿರುವ ವಿನಾಯಕ ಜ್ಯುವೆಲರ್ಸ್ ನಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ಮನೋಜ್ ಎಂಬುವವರಿಗೆ ಗುಂಡು ತಗುಲಿ ಗಾಯಗಳಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
2 ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸ್ಥಳೀಯರಿಗೆ ಗನ್ ತೋರಿಸಿ ಹೆದರಿಸಿ ಚಿನ್ನದ ಅಂಗಡಿಗೆ ನುಗ್ಗಿದ್ದಾರೆ. ನಂತರ ಅಂಗಡಿ ಮಾಲೀಕ ಮನೋಜ್ ಮೇಲೂ ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಅವರ ಕಾಲಿಗೆ ಗುಂಡು ತಗುಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತರ ಕಳ್ಳರು ಚಿನ್ನಾಭರಣ ದೋಚಿಕೊಂಡು ಹೋಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.