ಉತ್ತರ ಪ್ರದೇಶದ ಝಾನ್ಸಿಯಲ್ಲಿ ವಾರಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮೋಹಿತ್ ಎಂಬಾತ ಮಹಿಳೆಯೊಬ್ಬರನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಉತ್ತರ ಪ್ರದೇಶ ಪೋಲಿಸ್ ತನಿಖೆ ಆರಂಭಿಸಿದೆ.
ಪತ್ರಕರ್ತ ಮನೋಜ್ ಶರ್ಮಾ ಅವರ ಪ್ರಕಾರ, ಅಪರಾಧ ಹಿನ್ನಲೆ ಹೊಂದಿರುವ ಮೋಹಿತ್ ಕೇವಲ ನಾಲ್ಕು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಈ ವಿಡಿಯೋ ಉತ್ತರ ಪ್ರದೇಶದ ಝಾನ್ಸಿಯ ಬಾರಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೋದಲ್ಲಿ ಆರೋಪಿ ಮಹಿಳೆಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ವೈರಲ್ ವಿಡಿಯೋವನ್ನು ಗಮನಿಸಿದ ಝಾನ್ಸಿ ಪೋಲಿಸ್, “ನವಾಬಾದ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್‌ಗೆ ವಿಡಿಯೋದ ಸತ್ಯಾಸತ್ಯತೆಯನ್ನು ತನಿಖೆ ಮಾಡಲು ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ” ಎಂದು ಹೇಳಿದೆ.
वीडियो की प्रमाणिकता की जाँच एवं आवश्यक कार्यवाही हेतु प्रभारी निरीक्षक थाना नवाबाद को निर्देशित किया गया है।
— Jhansi Police (@jhansipolice) February 10, 2025