ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಅವಘಡ; ನಾಲ್ವರು ದುರ್ಮರಣ

ರಾಂಚಿ: ಮೊಹರಂ ಹಬ್ಬದ ಮೆರವಣಿಗೆ ವೇಳೆ ದುರಂತವೊಂದು ಸಂಭವಿಸಿದೆ. ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಬೊಕಾರೋದಲ್ಲಿ ನಡೆದಿದೆ.

ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಶಿಯಾ ಸಮುದಾಯದವರು ಖೆಟ್ಕೊ ಎಂಬಲ್ಲಿ ಶೋಕ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಮೆರವಣಿಗೆಯಲ್ಲಿ ಸಾಗಿದ್ದ ಜನರಿಗೆ ತಗುಲಿದೆ. ಹತ್ತು ಜನರಿಗೆ ಕರೆಂಟ್ ಶಾಕ್ ಹೊಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿದ್ಯುತ್ ಅವಘಡದ ವೇಳೆ ಮೆರವಣಿಗೆಯಲ್ಲಿ ವಿದ್ಯುತ್ ಸರಬರಾಜಿಗೆ ಇಡಲಾಗಿದ್ದ ಬ್ಯಾಟರಿ ಕೂಡ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಡಿವಿಸಿ ಬಕಾರೋ ಥರ್ಮಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read