alex Certify ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಜಾರ್ಖಂಡ್‌ ಖ್ಯಾತ ನಟಿ ಇಶಾ ಆಲಿಯಾ ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಪ್ರಕಾಶ್ ಕುಮಾರ್‌‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಶಾ ಕುಟುಂಬಸ್ಥರು ಪ್ರಕಾಶ್ ವಿರುದ್ಧ ದೂರು ದಾಖಲಿಸಿದ್ದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಹೌರಾ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಸ್ವಾತಿ ಭಂಗಾಲಿಯಾ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದೇ 28ರಂದು ಇಶಾ ಆಲಿಯಾ ಪತಿ ಮತ್ತು ಮಕ್ಕಳ ಜೊತೆ ರಾಂಚಿಯಿಂದ ಕೋಲ್ಕತಾಗೆ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ಕಳ್ಳತನ ನಡೆದಿತ್ತು ಆಗ ಪತ್ನಿಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ಪತಿ ಪ್ರಕಾಶ್ ಹೇಳಿಕೆ ನೀಡಿದ್ದರು. ಆದರೆ ಪೊಲೀಸರ ತನಿಖೆಯಲ್ಲಿ ಪ್ರಕಾಶ್ ಕೈವಾಡವಿದೆ ಎಂದು ಅನುಮಾನ ಬಂದಿತ್ತು.

ಜತೆಗೆ, ಇಶಾ ಕುಟುಂಬಸ್ಥರೂ ಅವರ ವಿರುದ್ಧ ದೂರು ದಾಖಲಿಸಿದ್ದರಿಂದ ಬಂಧಿಸಲಾಗಿದೆ. ಪೋಸ್ಟ್‌ ಮಾರ್ಟಮ್‌ನಲ್ಲಿ ತಿಳಿದು ಬಂದಿರುವ ಮಾಹಿತಿ ಪ್ರಕಾರ ಇಶಾ ಬಲ ಕಿವಿಯ ಬಳಿ ಗುಂಡು ತಗುಲಿತು ಮತ್ತೆ ಆಕೆಯನ್ನು ಪಾಯಿಂಟ್- ಬ್ಲಾಂಕ್‌ ರೇಂಜ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...