ಜಾರ್ಖಂಡ್ ನ ದುಮ್ಕಾದಲ್ಲಿ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ಕಾರ್ಯ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಬಗ್ಗೆ ವಿವರ ನೀಡಿದ ಎಸ್ಡಿಪಿಒ ವಿಜಯ್ ಕುಮಾರ್ ಮಹತೋ, ಟ್ರಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ… ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಸಾಂಜೋರ್ ಅಣೆಕಟ್ಟಿನಲ್ಲಿ ಪಿಕ್ನಿಕ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮುಫಸ್ಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ದಾಸೊರೈದಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಎಂದು ಸರ್ಕಲ್ ಆಫೀಸರ್(ದುಮ್ಕಾ) ಅಮರ್ ಕುಮಾರ್ ತಿಳಿಸಿದ್ದಾರೆ. ಮೃತರಲ್ಲಿ ದುಮ್ಕಾ ಮೂಲದ ವಕೀಲರು, ಅವರ ಕಿರಿಯ ಸಹೋದರ, ಅವರ ಪತ್ನಿ ಮತ್ತು ಅವರ ಮಗಳು ಸೇರಿದ್ದಾರೆ ಎಂದು ಹೇಳಿದರು.
ಅಪಘಾತಕ್ಕೀಡಾದ ಟ್ರಕ್ ವಶಪಡಿಸಿಕೊಳ್ಳಲಾಗಿದೆ. ಆದರೆ ಚಾಲಕ ಪರಾರಿಯಾಗಿದ್ದಾನೆ ಎಂದು ಮುಫಸ್ಸಿಲ್ ಪೊಲೀಸ್ ಠಾಣೆಯ ಅಧಿಕಾರಿ ಸತ್ಯಂ ಕುಮಾರ್ ತಿಳಿಸಿದ್ದಾರೆ.