alex Certify ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ತುರ್ತು ಅಗತ್ಯವಿದ್ದ ರೋಗಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಆರೋಗ್ಯ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ತುರ್ತು ಅಗತ್ಯವಿದ್ದ ರೋಗಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಆರೋಗ್ಯ ಸಚಿವ

ಆರೋಗ್ಯ ಸಚಿವರೊಬ್ಬರು ತಾವು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅಗತ್ಯವಿರುವುದನ್ನು ಮನಗಂಡು ಸ್ವತಃ ತಾವೇ ರಕ್ತದಾನ ಮಾಡಿರುವ ಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಶನಿವಾರದಂದು ಜಾರ್ಖಂಡ್ ಆರೋಗ್ಯ ಸಚಿವ ಬನ್ನಾ ಗುಪ್ತಾ ಅವರು ಜಮ್ಶೆಡ್ಪುರದ ಸರ್ಕಾರಿ ಎಂಜಿಎಂ ಆಸ್ಪತ್ರೆಗೆ ಕಾರ್ಯಕ್ರಮವೊಂದರ ನಿಮಿತ್ತ ಭೇಟಿ ನೀಡಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮ್ಮ ಪತಿಗೆ ತುರ್ತಾಗಿ ರಕ್ತದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ರಕ್ತದ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಯಿತಾದರೂ, ಸಕಾಲಕ್ಕೆ ಲಭ್ಯವಾಗಲಿಲ್ಲ. ಕೊನೆಗೆ ಸಚಿವರೇ ಸ್ವತಃ ರಕ್ತದಾನ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಚಿವರ ಮಾನವೀಯತೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...