ರಾಂಚಿ: ಕಡಿದ ಮರದ ದಿಮ್ಮಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಇಂದು ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸಿಸೈ ಪೊಲೀಸ್ ಠಾಣಾ ವ್ಯಾಪ್ತಿಯ ಸಕ್ರೌಲಿ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.
ಕುಟುಂಬದವರ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಅವರಲ್ಲಿ ಒಬ್ಬನು ಹರಿತವಾದ ಕೊಡಲಿಯಿಂದ ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾನೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಸುರೇಶ್ ಪ್ರಸಾದ್ ಸಾಹು ತಿಳಿಸಿದ್ದಾರೆ. .
ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(RIMS) ಸೇರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.